Friday, June 5, 2026
Homeತಾಜಾ ಸುದ್ದಿಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ

ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ

- Advertisement -
- Advertisement -

ನವದೆಹಲಿ: ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ‌. ಚುನಾವಣಾ ಆಯೋಗ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಘೋಷಣೆ ಮಾಡಿದೆ.

ಈ ಮೂಲಕ ಪಕ್ಷ ಸ್ಥಾಪನೆಯಾದ ಹತ್ತೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ ಸಾಧನೆಯನ್ನು ಆಮ್ ಆದ್ಮಿ ಪಾರ್ಟಿ ಮಾಡಿದೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್, ಎನ್ ಸಿಪಿ ಮತ್ತು ಸಿಪಿಐ ಪಕ್ಷಗಳ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಚುನಾವಣಾ ಆಯೋಗ ವಾಪಸ್ ಪಡೆದಿದೆ.

ಒಂದು ಪಕ್ಷ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು, ಲೋಕಸಭೆಯಲ್ಲಿ ನಾಲ್ವರು ಸಂಸದರಿರಬೇಕು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 6 ರಷ್ಟು ಮತ ಗಳಿಕೆಯ ಪ್ರಮಾಣ ಹೊಂದಿರಬೇಕಾಗಿದೆ.

ಆಮ್ ಆದ್ಮಿ ಪಕ್ಷ ಈಗಾಗಲೇ ದೆಹಲಿ ಮತ್ತು ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದು, ಗೋವಾ ವಿಧಾನಸಭೆ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.‌

- Advertisement -

Latest News

error: Content is protected !!