Wednesday, June 3, 2026
Homeಕರಾವಳಿಸುಳ್ಯ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

ಸುಳ್ಯ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

- Advertisement -
- Advertisement -

ಸುಳ್ಯ: ತೆಂಗಿನ ಕಾಯಿ ಕೀಳುವಾಗ ಕಾಲು ಜಾರಿ ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯದ ದೇವಚಳ್ಳ ಗ್ರಾಮದ ಅಂಬೆಕಲ್ಲು ಬಳಿಯ ಪೆರ್ಲಡಿ ಎಂಬಲ್ಲಿ ನಡೆದಿದೆ.

ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ ನಿವಾಸಿ ಸತೀಶ ಮಣಿಯಾಣಿ ಮೃತಪಟ್ಟವರು. ನಿನ್ನೆ ತೆಮಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!