Saturday, June 13, 2026
Homeಕರಾವಳಿಪುತ್ತೂರಿನ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ರಾಜಕೀಯ ಹಿನ್ನೆಲೆಯೇನು?

ಪುತ್ತೂರಿನ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ರಾಜಕೀಯ ಹಿನ್ನೆಲೆಯೇನು?

- Advertisement -
- Advertisement -

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಒಲಿದಿದೆ. ಅಭ್ಯರ್ಥಿಗಳ ರೇಸ್ ನಲ್ಲಿ ಒಂದಷ್ಟು ಹೆಸರುಗಳು ಕೇಳಿ ಬರುತ್ತಿದ್ದವು.  ಕೊನೆಗೆ ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕುಂತೂರು ಗ್ರಾಮದ ಆಶಾ ತಿಮ್ಮಪ್ಪ ಗೌಡ ಕುಂಡಡ್ಕ ಅವರಿಗೆ ಒಲಿದಿದೆ.

ಪದವು ನಿವಾಸಿ ತಿಮ್ಮಪ್ಪ ಗೌಡ ಅವರ ಪತ್ನಿ 65ರ ಹರೆಯದ ಆಶಾರವರು ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತೆ. ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಹೊಂದಿದ್ದಾರೆ. ಇವರು ನೆಲ್ಯಾಡಿ ಹಾಗೂ ಬೆಳ್ಳಾರೆಯಿಂದ ಜಿ. ಪಂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ವಿಶೇಷ ಎಂದರೇ ಇವರು ಪೆರಾಬೆ ಗ್ರಾಮದಿಂದ ಬಿಜೆಪಿಯಿಂದ ಎಂಎಲ್ ಎ ಚುನಾವಣೆ ಸ್ಪರ್ಧಿಸುತ್ತಿರುವ ಎರಡನೇ ಅಭ್ಯರ್ಥಿ. ಈ ಹಿಂದೆ ಶಕುಂತಳಾ ಟಿ ಶೆಟ್ಟಿ ಬಿಜೆಪಿಯಿಂದ ಬಂಟ್ವಾಳ ಹಾಗೂ ಪುತ್ತೂರಿನಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದರು.

- Advertisement -

Latest News

error: Content is protected !!