Wednesday, June 3, 2026
Homeತಾಜಾ ಸುದ್ದಿವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ 

ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ 

- Advertisement -
- Advertisement -

ಹಾವೇರಿ: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ.

ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅತ್ತ ಕಾಂಗ್ರೆಸ್ ಟಿಕೆಟ್‍ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದ್ದ ಅವರು, ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದ್ದರಿಂದ ಬೇಸರಗೊಂಡಿದ್ದರು. ಈ ಹಿನ್ನಲೆಯಲ್ಲೇ ಎಂಎಲ್ಸಿ ಸ್ಥಾನಕ್ಕೆ ಆರ್ ಶಂಕರ್ ರಾಜೀನಾಮೆ ನೀಡಿದ್ದಾರೆ 

- Advertisement -

Latest News

error: Content is protected !!