Thursday, June 4, 2026
Homeಕರಾವಳಿಇಂದಿನಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ

ಇಂದಿನಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ

- Advertisement -
- Advertisement -

ಮಂಗಳೂರು: ಇಂದಿನಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ ಇರುವ ಕಾರಣ ನಾಮಪತ್ರ ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ದ.ಕ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲೂ ಚುನಾವಣೆಗೆ ಸಂಬಂಧಿಸಿ ಮಾಡಿರುವ ತಯಾರಿಯ ಬಗ್ಗೆ ವಿವರಿಸಿದರು.ನಾಮಪತ್ರ ಸಲ್ಲಿಸಲು ಎ. 20ರಂದು ಕೊನೆಯ ದಿನವಾಗಿರುತ್ತದೆ. ಎ. 21ನಾಮಪತ್ರ ಪರಿಶೀಲನೆ ಹಾಗೂ ಎ.24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ಮಾಹಿತಿ ನೀಡಿದರು.

- Advertisement -

Latest News

error: Content is protected !!