Thursday, June 4, 2026
Homeತಾಜಾ ಸುದ್ದಿಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್

ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್

- Advertisement -
- Advertisement -

ಮೈಸೂರು : ಬಿಜೆಪಿ ಅಭ್ಯರ್ಥಿಗಳ ಒಂದೊಂದೇ ಪಟ್ಟಿ ರಿಲೀಸ್ ಆಗುತ್ತಿದ್ದಂತೆ ಇತ್ತ ರಾಜೀನಾಮೆ ನೀಡುವವರ ಪಟ್ಟಿ ಸಹ ಬೆಳೆಯುತ್ತಲೇ ಇದೆ.  ಇದೀಗ ಚುನಾವಣಾ ರಾಜಕೀಯಕ್ಕೆ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಬಿಜೆಪಿ 2 ನೇ ಪಟ್ಟಿ ಬಿಡುಗಡೆ ಹಿನ್ನೆಲೆ ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ದಿಢೀರ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಮಾತನಾಡಿದ ಅವರು ತಾವು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ, 2019 ರಲ್ಲಿ ಚಾಮರಾಜನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

- Advertisement -

Latest News

error: Content is protected !!