Friday, June 5, 2026
Homeಕರಾವಳಿಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಅಂಗಾರ: ಭಾಗೀರಥಿ ಮುರುಳ್ಯ ಪರ ಪ್ರಚಾರ

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಅಂಗಾರ: ಭಾಗೀರಥಿ ಮುರುಳ್ಯ ಪರ ಪ್ರಚಾರ

- Advertisement -
- Advertisement -

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಸಚಿವ ಅಂಗಾರ ಕಳೆದ ಎರಡು ದಿನಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ರು. ರಾಜಕೀಯದಲ್ಲಿ ಪ್ರಾಮಾಣಿಕರಿಗೆ ಬೆಲೆ ಇಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು.

ಆದ್ರೆ ಇದೀಗ ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ತಾನು ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ತತ್‌ಕ್ಷಣದ ನೋವಿನಿಂದ ಆ ರೀತಿ ಹೇಳಿಕೆ ನೀಡಿದ್ದೆ. ಆದ್ರೆ ಇದೀಗ ನನಗೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಂತೆ ರಾಜಕೀಯದಲ್ಲಿ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಚಾರ ಸಮಿತಿ ಮುಖ್ಯಸ್ಥ ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!