Sunday, October 18, 2026
Homeಕರಾವಳಿಪುತ್ತೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್; ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ; ಏ. 17ರಂದು...

ಪುತ್ತೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್; ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ; ಏ. 17ರಂದು ನಾಮಪತ್ರ ಸಲ್ಲಿಕೆ

- Advertisement -
- Advertisement -

ಪುತ್ತೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.

ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.ಇಂದು ಸುದ್ದಿಗೋಷ್ಟಿ ಕರೆದು ತಮ್ಮ ನಿಲುವನ್ನು ಪ್ರಕಟಿಸಿರುವ ಅರುಣ್ ಕುಮಾರ್ ಪುತ್ತಿಲ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಎ 17ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ ಸೇವೆಯ ಬಳಿಕ ಗಂಧ ಪ್ರಸಾದ ಸ್ವೀಕರಿಸಿ ಬೆಂಬಲಿಗರೊಂದಿಗೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

- Advertisement -

Latest News

error: Content is protected !!