Sunday, June 14, 2026
Homeಕರಾವಳಿಉಡುಪಿಉಡುಪಿ; ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

ಉಡುಪಿ; ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

- Advertisement -
- Advertisement -

ಉಡುಪಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಕಾರು ಬೆಂಕಿಗಾಹುತಿಯಾಗಿರುವ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ.


ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರು ತಮ್ಮ ರಿಟ್ಸ್ ಕಾರಿನಲ್ಲಿ ನಿನ್ನೆ ರಾತ್ರಿ ಕೋಲ ಮುಗಿಸಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಬೆಂಕಿಯಿಂದ ಇಡೀ ಕಾರು ಹೊತ್ತಿ ಭಸ್ಮ ವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದರಿಂದ ಲಕ್ಷಾಂತರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!