Friday, June 5, 2026
Homeತಾಜಾ ಸುದ್ದಿಇದು ನನ್ನ ಕೊನೆ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಇದು ನನ್ನ ಕೊನೆ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಮೈಸೂರು : ಇಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ರು. ಅದಕ್ಕೂ ಮುನ್ನ ವರುಣ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ವರುಣದಲ್ಲಿ ರೋಡ್ ಶೋ ಬಳಿಕ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಜೆಡಿಎಸ್ ನನ್ನನ್ನು ಸೋಲಿಸಲು ಹಣದ ಹೊಳೆ ಹರಿಸಬಹುದು.

ಆದರೆ ಈ ಕ್ಷೇತ್ರದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನನ್ನನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂದರು.ನನ್ನ ವಿರುದ್ಧ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿದ್ದು, ಜೆಡಿಎಸ್ ನ ನಿಂದ ದಲಿತರಿಗೆ ಟಿಕೆಟ್ ನೀಡಲಾಗಿದೆ. ನನ್ನ ವಿರುದ್ಧ ಬಿಜೆಪಿಯವರು ಕುತುಂತ್ರ ಮಾಡಿದ್ದಾರೆ. ಆದರೆ ವರುಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಕೋಮುವಾದಿ ಪಕ್ಷ ರಾಜ್ಯವನ್ನು ಹಾಳು ಮಾಡಿದ್ದಾರೆ. ಆರ್ಥಿಕವಾಗಿ ದಿವಾಳಿಯಾಗಿದೆ. 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕು. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಇದು ನನ್ನ ಕೊನೆಯ ಚುನಾವಣೆ ಈ ಚುನಾವಣೆ ಬಳಿಕ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!