Monday, June 8, 2026
Homeತಾಜಾ ಸುದ್ದಿBIG SHOCKING: ಇವತ್ತು 397 ಮಂದಿಗೆ ಕೊರೋನಾ, 14 ಮಂದಿ ಸಾವು

BIG SHOCKING: ಇವತ್ತು 397 ಮಂದಿಗೆ ಕೊರೋನಾ, 14 ಮಂದಿ ಸಾವು

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಬುಧವಾರ 397 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,118 ಆಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 5 ಜನ ಸೇರಿ 14 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ.164 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಒಟ್ಟಾರೆ 78 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 164 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು 173 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 3799 ಚಿಕಿತ್ಸೆ ಪಡೆಯುತ್ತಿದ್ದಾರೆ. 6141 ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!