Wednesday, June 3, 2026
Homeಕರಾವಳಿಉಡುಪಿಉದ್ಯಾವರ: ಕುಡಿದ ಮತ್ತಿನಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯ

ಉದ್ಯಾವರ: ಕುಡಿದ ಮತ್ತಿನಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಉದ್ಯಾವರ: ಕುಡಿದ ಮತ್ತಿನಲ್ಲಿ ಇಬ್ಬರು ಜಗಳವಾಡಿ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ.

ಪಿತ್ರೋಡಿ ನಿವಾಸಿ ದಯಾನಂದ (40) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಬಾರ್‌ ಒಂದರಲ್ಲಿ ದಯಾನಂದ ಮತ್ತು ಭರತ್‌ ಎಂಬಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ಗಲಾಟೆ ತಾರಕಕ್ಕೇರಿ ಭರತ್‌ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದನ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ದಯಾನಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಇನ್ನು ಆರೋಪಿ ಭರತ್ ನನ್ನು ಕಾಪು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

- Advertisement -

Latest News

error: Content is protected !!