Tuesday, June 9, 2026
Homeಚಿಕ್ಕಮಗಳೂರುಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ದಂಪತಿ‌ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿ ದಂಪತಿ‌ ಸ್ಥಳದಲ್ಲೇ ಸಾವು

- Advertisement -
- Advertisement -

ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ದಂಪತಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು.  ಈ ವೇಳೆ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!