Friday, June 5, 2026
Homeಕರಾವಳಿವೇಣೂರು: ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್‌ ಪೂಂಜ ಚಾಲನೆ

ವೇಣೂರು: ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್‌ ಪೂಂಜ ಚಾಲನೆ

- Advertisement -
- Advertisement -

ವೇಣೂರು: 2023 ರ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್‌ ಪೂಂಜ ಅವರು ಇಂದು (ದಿನಾಂಕ 22.04.2023) ಮನೆ ಮನೆ ಭೇಟಿಯ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

ದಿನವಿಡೀ ಶಾಸಕರು ಬಜಿರೆ, ಗುಂಡೂರಿ, ಆರಂಬೋಡಿ, ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ, ನಾರಾವಿ, ಕುತ್ಲೂರು, ಕೊಕ್ರಾಡಿ, ಸಾವ್ಯ, ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ, ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ಕಾರ್ಯಕರ್ತರೊಂದಿಗೆ ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

ಇಂದು ನಮ್ಮ ಮನೆ ಮನೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ. ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ. ನಮ್ಮ ಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸ ಮಾಡುತ್ತಿದ್ದು, ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು ಎಂದು ಹರೀಶ್‌ ಪೂಂಜ ಹೇಳಿದ್ರು.

ಮನೆ ಭೇಟಿಯ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಅಭ್ಯರ್ಥಿ ಪ್ರಮುಖ್ ಶ್ರೀ ಜಯಾನಂದ ಗೌಡ, ಸ್ಥಳೀಯ ಜನಪ್ರತಿನಿಧಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!