Saturday, June 6, 2026
Homeತಾಜಾ ಸುದ್ದಿನಾಳೆ ಮಂಗಳೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ:ಸುಳ್ಯ, ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ

ನಾಳೆ ಮಂಗಳೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ:ಸುಳ್ಯ, ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ

- Advertisement -
- Advertisement -

ಮಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.

ನಾಳೆ ಸಂಜೆ 5:30ಕ್ಕೆ ಹೆಲಿಕಾಫ್ಟರ್ ಮೂಲಕ ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಗೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದು, ನಾಳೆ ರಾತ್ರಿ ಮಂಗಳೂರಿನಲಿ ವಾಸ್ತವ್ಯ ಹೂಡಲಿದ್ದಾರೆ.ಮಂಗಳವಾರ ಬೆಳಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಮಲ್ಲಿಕಾರ್ಜುನ ಖರ್ಗೆ, ಮಧ್ಯಾಹ್ನ 12 ಗಂಟೆಗೆ ಸುಳ್ಯದಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಬಳಿಕ ಸಂಜೆ 4 ಗಂಟೆಗೆ ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಜೆ 6 ಗಂಟೆಗೆ ಮಂಗಳೂರಿನಿಂದ ವಾಪಾಸಾಗಲಿದ್ದಾರೆ.

- Advertisement -

Latest News

error: Content is protected !!