Friday, June 5, 2026
Homeತಾಜಾ ಸುದ್ದಿಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಕುಮಾರಸ್ವಾಮಿ; ಇಂದಿನಿಂದ ಪ್ರಚಾರ ಕಾರ್ಯದಲ್ಲಿ ಭಾಗಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಕುಮಾರಸ್ವಾಮಿ; ಇಂದಿನಿಂದ ಪ್ರಚಾರ ಕಾರ್ಯದಲ್ಲಿ ಭಾಗಿ

- Advertisement -
- Advertisement -

ಬೆಂಗಳೂರು: ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು 3 ದಿನಗಳ ಚಿಕಿತ್ಸೆಯ ಬಳಿಕ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ಕಳೆದ 3 ದಿನಗಳ ಹಿಂದೆ ದಾಖಲಾಗಿದ್ದರು. ನಿರಂತರ  ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದರು.ಅದರಂತೆ

ಆಸ್ಪತ್ರೆಯಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯುತ್ತಲೇ ಚುನಾವಣಾ ರೂಪರೇಷೆ ಸಿದ್ದಪಡಿಸುತ್ತಿದ್ದರು.

ನಿನ್ನೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ವೈದ್ಯರ ಸಲಹೆಯ ಮೇರೆಗೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುಮಾರಸ್ವಾಮಿ ಅವರು, ಮಣಿಪಾಲ್ ಆಸ್ಪತ್ರೆಯಿಂದ ನೇರವಾಗಿ ಜೆಪಿ ನಗರದ ನಿವಾಸಕ್ಕೆ ತೆರಳಿದ್ದಾರೆ. ಇಂದು  ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಇಂದು 1 ಗಂಟೆಗೆ ಚಾಮರಾಜ ಕ್ಷೇತ್ರ, 3 ಗಂಟೆಗೆ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ ಪ್ರಚಾರ ನಡೆಸಲಿದ್ದಾರೆ.

- Advertisement -

Latest News

error: Content is protected !!