Saturday, June 6, 2026
Homeಕರಾವಳಿಪುತ್ತೂರು; ಭಾರತೀಯ ಜನತಾ ಪಾರ್ಟಿ ಸೇರಿದ ಶೇಖರ್ ಮಾಡಾವು

ಪುತ್ತೂರು; ಭಾರತೀಯ ಜನತಾ ಪಾರ್ಟಿ ಸೇರಿದ ಶೇಖರ್ ಮಾಡಾವು

- Advertisement -
- Advertisement -

ಪುತ್ತೂರು; 2018 ರ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ಶೇಖರ ಮಾಡಾವು ಅವರು ಇಂದು ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಮೆಚ್ಚಿಕೊಂಡು ಪುತ್ತೂರು ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವೆ ಡಾಕ್ಟರ್ ಭಾರತಿ ಪ್ರವೀಣ್ ಪವರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.

 ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಜಗನ್ ನಿವಾಸ ರಾವ್, ಚುನಾವಣಾ ಸಂಚಾಲಕರಾದ ಅಪ್ಪಯ್ಯ ಮಣಿಯಾನಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚಣೀಲಾ ತಿಮ್ಮಪ್ಪ ಶೆಟ್ಟಿ, ಕ್ಷೇತ್ರ ಪ್ರಭಾರಿಗಳಾದ ರಾಜೇಶ್ ಕಾವೇರಿ ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಆರ್ ಸಿ ನಾರಾಯಣ್ , ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ್ ಗೌಡ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಶೆಟ್ಟಿ ,ಅರುಣ್ ವಿಟ್ಲ ,ಹರಿಪ್ರಸಾದ್ ಯಾದವ್, ಸಹಜ್ ರೈ ಚಂದ್ರಶೇಖರ್ ರಾವ್ ಬಪ್ಪಳಿಗೆ , ಪುನೀತ್ ಮಾಡತ್ತಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು

- Advertisement -

Latest News

error: Content is protected !!