Friday, June 5, 2026
Homeಕರಾವಳಿಏ.29 ರಂದು ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಏ.29 ರಂದು ಮಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

- Advertisement -
- Advertisement -

ಮಂಗಳೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು ಕೇಂದ್ರದ ನಾಯಕರ ದಂಡೇ ಚುನಾವಣಾ ಪ್ರಚಾರಕ್ಕೆ ಕರಾವಳಿಯತ್ತ ಹರಿದು ಬರುತ್ತಿದೆ.ಅದರಂತೆ ಏಪ್ರಿಲ್ 29 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಗಳೂರಿಗೆ ಆಗಮಿಸಲಿದ್ದಾರೆ.

ಮಂಗಳೂರು ನಗರದಲ್ಲಿ ಅಮಿತ್ ಶಾ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಏ.29 ರಂದು ಸಂಜೆ 4 ಗಂಟೆಗೆ  ಪುರಭವನದ ಕ್ಲಾಕ್‌ ಟವರ್‌ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್‌ ರಾವ್‌ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್‌ ರೋಡ್‌ ಶೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!