Friday, June 5, 2026
Homeಪ್ರಮುಖ-ಸುದ್ದಿಬೆಂಗಳೂರು ಸೀಲ್ ಡೌನ್ ಆಗ್ಬಾರ್ದು ಅಂದ್ರೆ ಸಾಮಾಜಿಕ ಅಂತರ ಕಾಪಾಡಿ- ಸಿಎಂ ಬಿಎಸ್ವೈ ಎಚ್ಚರಿಕೆ

ಬೆಂಗಳೂರು ಸೀಲ್ ಡೌನ್ ಆಗ್ಬಾರ್ದು ಅಂದ್ರೆ ಸಾಮಾಜಿಕ ಅಂತರ ಕಾಪಾಡಿ- ಸಿಎಂ ಬಿಎಸ್ವೈ ಎಚ್ಚರಿಕೆ

- Advertisement -
- Advertisement -

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನೇ ದಿವೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಕೂಡ ಹೆಚ್ಚಾಗುತ್ತಿದೆ. ಈಗಾಗಲೇ ಕೆಲವೊಂದು ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ. ಮತ್ತೊಂದು ಕಡೆ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯನ್ನು ಎದುರಿಸುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ರಾಜ್ಯ ಸರ್ಕಾರ ಕೂಡ ಕೋವಿಡ್ -19 ನಿಯಂತ್ರಣಕ್ಕೆ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೀಗಿರುವಾಗಲೇ ಇದೀಗ ಸಿಎಂ ಯಡಿಯೂರಪ್ಪನವರು ಬೆಂಗಳೂರು ಜನರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಕೋವಿಡ್ -19 ತಡೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಇವತ್ತು ಮತ್ತು ನಾಳೆ ಈ ನಿಟ್ಟಿನಲ್ಲಿ ಸಭೆ ನಡೆಸಲಿದ್ದೇವೆ. ಸಭೆಯಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಬೆಂಗಳೂರು ಸೀಲ್ ‌ಡೌನ್ ಆಗಬಾರದು ಅಂದ್ರೇ ಎಲ್ಲರೂ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ಬೆಂಗಳೂರನ್ನು ಸೀಲ್ ಡೌನ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಕೆಲವು ಏರಿಯಾಗಳನ್ನ ಲಾಕ್‌ಡೌನ್ ಮಾಡಲಾಗಿದೆ, ಅದು ಹಾಗೇ ಮುಂದುವರಿಯುತ್ತದೆ ಎಂದಿದ್ದಾರೆ. ಜೊತೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗೂ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!