Wednesday, June 3, 2026
Homeಕರಾವಳಿಬೆಳ್ತಂಗಡಿ: ನೆರಿಯದಲ್ಲಿ ಹರೀಶ್‌ ಪೂಂಜ ಅಬ್ಬರದ ಪ್ರಚಾರ

ಬೆಳ್ತಂಗಡಿ: ನೆರಿಯದಲ್ಲಿ ಹರೀಶ್‌ ಪೂಂಜ ಅಬ್ಬರದ ಪ್ರಚಾರ

- Advertisement -
- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ನೆರಿಯದಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಾವಿರಕ್ಕೂ ಅಧಿಕ ಮತದಾರರು, ನೂರಾರು ಕಾರ್ಯಕರ್ತರು ಪ್ರಚಾರ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹರೀಶ್‌ ಪೂಂಜ ಅವರು ಮಾತನಾಡುತ್ತಾ, ಅಪಾರ ಸಂಖ್ಯೆಯಲ್ಲಿ ಸೇರಿರುವ ಜನಸಂಖ್ಯೆಯೇ ಬಿಜೆಪಿ ಪಕ್ಷ ಗೆಲುವನ್ನು ಸಾರಿ ಸಾರಿ ಹೇಳುತ್ತಿದೆ ಎಂದರು..

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಸುಬ್ರಮಣ್ಯ ಅಗರ್ತ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್‌ ಜಯಾನಂದ್‌ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!