Friday, June 5, 2026
Homeಕರಾವಳಿಉಡುಪಿಉಡುಪಿ; ಕಾರಿನಲ್ಲಿ ಬಂದು ಮೊಬೈಲ್ ಕಳ್ಳತನ

ಉಡುಪಿ; ಕಾರಿನಲ್ಲಿ ಬಂದು ಮೊಬೈಲ್ ಕಳ್ಳತನ

- Advertisement -
- Advertisement -

ಉಡುಪಿ: ಕಾರಿನಲ್ಲಿ ಬಂದು ಮೊಬೈಲ್ ಕಳ್ಳತನ ಮಾಡಿರುವ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ರಾಜ್‌ಟವರ್ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಮೊಬೈಲ್ ಅಂಗಡಿಗೆ ಬಂದ ಪ್ರದೀಪ್ ಸ್ಯಾಮುವೆಲ್ ಸದಾನಂದ ಎಂಬವರು ತನ್ನ ಮೊಬೈಲ್‌ನ್ನು ಅಂಗಡಿಯ ಕಂಟೌರ್ ಮೇಲೆ ಇಟ್ಟಿದ್ದರು.ಈ ವೇಳೆ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರಲ್ಲಿ ಓರ್ವ ಕೌಂಟರ್ ಮೇಲೆ ಇಟ್ಟಿದ್ದ ಮೊಬೈಲ್ ಕಳವು ಮಾಡಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಕಳವಾದ ಮೊಬೈಲ್‌ನ ಮೌಲ್ಯ 10,000 ರೂ. ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!