Friday, June 5, 2026
Homeತಾಜಾ ಸುದ್ದಿಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಶೋಭಾ ಕರಂದ್ಲಾಜೆ

ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಶೋಭಾ ಕರಂದ್ಲಾಜೆ

- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿರೋದಾಗಿ ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ಟ್ವಿಟ್ಟರ್‌ ಮೂಲಕವೂ ಪ್ರತಿಕ್ರಿಯಿಸಿ, ಕರ್ನಾಟಕದ ನೆಲದಲ್ಲಿ ನಿಂತು ತುಕ್ಡೇ ತುಕ್ಡೇ ಗ್ಯಾಂಗ್‌ನವರ ಭಾಷೆಯನ್ನು ಬಳಸಿ ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾಡಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಕರ್ನಾಟಕದವರ ಬಗ್ಗೆ, ಅವರ ದೇಶಭಕ್ತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

- Advertisement -

Latest News

error: Content is protected !!