Saturday, June 13, 2026
Homeಕರಾವಳಿಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ರಾಜೀನಾಮೆ ನೀಡುವ ಸಾಧ್ಯತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ರಾಜೀನಾಮೆ ನೀಡುವ ಸಾಧ್ಯತೆ

- Advertisement -
- Advertisement -

ಬೆಂಗಳೂರು:  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಕಾರಣ , ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿರುವ , ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್‌ ತಮ್ಮ ರಾಜೀನಾಮೆಯನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಲ್ಲದೇ ನಳೀನ್ ಕುಮಾರ್ ಕಟೀಲ್‌ ಸಮರ್ಥವಾಗಿ ರಾಜ್ಯಾಧ್ಯಕ್ಷ ರಾಗಿ ಕೆಲಸ ಮಾಡಿಲ್ಲ, ಪಾರ್ಟಿಯನ್ನು ಚುನಾವಣೆ ವೇಳೆಯಲ್ಲಿ ಬಿಜೆಪಿ ಸಂಘಟನೆಯಲ್ಲಿ ಅವರು ಯಡವಿದ್ದರೆ ಎನ್ನಲಾಗುತ್ತಿದೆ. ಇದಲ್ಲದೇ ಯಾವುದೇ ರಾಜಕೀಯ ಪಾರ್ಟಿಗಳು ಸೋತ ಸಮಯದಲ್ಲಿ ನೈತಿಕ ಹೊಣೆ ಹೊತ್ತು ಆ ಪಾರ್ಟಿಗಳ ಮುಖ್ಯಸ್ಥರು ರಾಜೀನಾಮೆ ನೀಡುವುದು ಹಿಂದಿನಿಂದಲೂ ಕೂಡ ನಡೆದುಕೊಂಡು ಬಂದಿದೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!