Thursday, June 25, 2026
Homeತಾಜಾ ಸುದ್ದಿಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ್ ಬೊಮ್ಮಾಯಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಬೆಂಗಳೂರು; ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವುದು ಸ್ಪಷ್ಟವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

 ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ಈ ಬಳಿಕ ಮಾತನಾಡಿದಂತ ಅವರು, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯಪಾಲರು ಅದನ್ನು ಅಂಗೀಕರಿಸಲಾಗಿದೆ ಎಂದು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!