Thursday, June 4, 2026
Homeತಾಜಾ ಸುದ್ದಿಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಣೆ ಹಿನ್ನೆಲೆ; ರೇಣುಕಾಚಾರ್ಯ ಅಭಿಮಾನಿಯೊಬ್ಬ ವಿಷ ಸೇವನೆಗೆ ಯತ್ನ

ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಣೆ ಹಿನ್ನೆಲೆ; ರೇಣುಕಾಚಾರ್ಯ ಅಭಿಮಾನಿಯೊಬ್ಬ ವಿಷ ಸೇವನೆಗೆ ಯತ್ನ

- Advertisement -
- Advertisement -

ದಾವಣಗೆರೆ : ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ರೇಣುಕಾಚಾರ್ಯ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದ ರೇಣುಕಾಚಾರ್ಯ ನಿವಾಸದ ಮುಂದೆ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.ಈ ವೇಳೆ ರೇಣುಕಾಚಾರ್ಯ ಅಭಿಮಾನಿಯೊಬ್ಬ ವಿಷ ಸೇವನೆಗೆ ಮುಂದಾಗಿದ್ದು, ಕೂಡಲೇ ಕಾರ್ಯಕರ್ತರು ತಡೆದಿದ್ದಾರೆ.

ಸಾಕಷ್ಟು ಕುತೂಹಲ ಮೂಡಿಸಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರೇಣುಕಾರ್ಯ ಸೋಲನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

- Advertisement -

Latest News

error: Content is protected !!