Saturday, June 6, 2026
Homeಕರಾವಳಿಉಡುಪಿಉಡುಪಿ; ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಉಡುಪಿ; ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಉಡುಪಿ; ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಕೊಲೆಯಾದ ವ್ಯಕ್ತಿ. ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ.

ಕುಂದಾಪುರದಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರಾಗಿದ್ದ ಸಂಗಪ್ಪ ಹಾಗೂ ರಾಜಾ ಕೆಲಸವಿದ್ದಾಗ ತೆರಳಿದ್ದಲ್ಲಿಯೇ ಉಳಿಯುತ್ತಿದ್ದರು. ಈ ವೇಳೆ ಮದ್ಯ ಸೇವಿಸಿದ್ದ ರಾಜಾ ಹಾಗೂ ಸಂಗಪ್ಪ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದೆ.ಬಳಿಕ ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಪ್ಪನ ತಲೆಯ ಮೇಲೆ ರಾಜಾ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ಅಲ್ಲಿಯೇ ಸಮೀಪದಲ್ಲಿದ್ದ ದಣಿಯ ಮನೆಗೆ ಬಂದು ಮಾಹಿತಿ ನೀಡಿದ್ದು ಆತನನ್ನು ಹಿಡಿದಿಟ್ಟುಕೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!