Saturday, June 6, 2026
Homeಕರಾವಳಿಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ

- Advertisement -
- Advertisement -

ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ.‌ ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದಿದ್ದಾರೆ.

ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದ್ದಾರೆ.

- Advertisement -

Latest News

error: Content is protected !!