Friday, June 5, 2026
Homeತಾಜಾ ಸುದ್ದಿಸಿಎಂ ಆಯ್ಕೆ ಇನ್ನೂ ಆಗಿಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್...

ಸಿಎಂ ಆಯ್ಕೆ ಇನ್ನೂ ಆಗಿಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ; ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆ

- Advertisement -
- Advertisement -

ವದೆಹಲಿ : ಸಿಎಂ ಆಯ್ಕೆ ಇನ್ನೂ ಆಗಿಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ . ಮಲ್ಲಿಕಾರ್ಜುನ ಖರ್ಗೆ ಅವರೇ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾತನಾಡಿದ ಸುರ್ಜೆವಾಲಾ ಸಿಎಂ ಆಯ್ಕೆ ಬಗ್ಗೆ ಖರ್ಗೆ ಅವರೇ ತೀರ್ಮಾನ ಮಾಡುತ್ತಾರೆ ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ ಎಂದರು.

ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಸಿಎಂ ಆಯ್ಕೆ ಬಗ್ಗೆ ಈವರೆಗೆ ಅಂತಿಮ ನಿರ್ಧಾರವಾಗಿಲ್ಲ. ಅವಿರೋಧವಾಗಿ ಸಿಎಲ್ ಪಿ ನಾಯಕನ ಆಯ್ಕೆಗಾಗಿ ಪ್ರಯತ್ನಿಸಲಾಗುತ್ತಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. 48-72 ಗಂಟೆಯೊಳಗೆ ನೂತನ ಸಂಪುಟ ರಚಿಸಲಾಗುತ್ತದೆ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಹೆಸರನ್ನು ಅಂತಿಮಗೊಳಿಸಲಿದ್ದಾರೆ. ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ಮುಂದಿನ 48-72 ಗಂಟೆಯಲ್ಲಿ ಅಸ್ತಿತ್ವಕ್ಕೆ ಬರಲಿದೆ. ಅಲ್ಲಿಯವರೆಗೂ ಕನ್ನಡಿಗರು, ಮಾಧ್ಯಮದವರು ಕಾಯಬೇಕು. ಯಾವುದೇ ಸುಳ್ಳುಸುದ್ದಿಗಳಿಗೆ ಕಿವಿಗೊಡದಂತೆ ಅವರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!