Thursday, June 4, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಬೆಂಗಳೂರು : ಮುಂದಿನ 5 ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 21 ಮತ್ತು 22 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗಾಳಿ, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾರಾಂತ್ಯದಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!