Thursday, June 4, 2026
Homeಕರಾವಳಿಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟವೆ ಮಂಗಳೂರಿನಲ್ಲಿ ನಡೆದಿದೆ. ಪ್ರಥಮ ವರ್ಷದ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆಸ್ಮಾ ಬಾನೊ ನಾಪತ್ತೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 15ರಂದು ಈಕೆ ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.
ಮೇ 15ರಂದು ಬೆಳಗ್ಗೆ 9.15ಕ್ಕೆ ಮನೆಯಿಂದ ವ್ಯಾಸಂಗ ಮಾಡುತ್ತಿದ್ದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. ಈಕೆ ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್‌ ಖಾಲಿಕ್‌ ಅವರು ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್‌ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್‌ ಪ್ರಕಟನೆ ತಿಳಿಸಿದೆ

- Advertisement -

Latest News

error: Content is protected !!