Friday, June 5, 2026
Homeತಾಜಾ ಸುದ್ದಿತುಮಕೂರಿನಿಂದ ನಾಪತ್ತೆಯಾಗಿದ್ದ  ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ

ತುಮಕೂರಿನಿಂದ ನಾಪತ್ತೆಯಾಗಿದ್ದ  ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ

- Advertisement -
- Advertisement -

ತುಮಕೂರಿನಿಂದ ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದಾರೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಇದ್ದಕಿದ್ದಂತೆ ನಾಪತ್ತೆಯಾಗಿದ್ದರು. ಇದೀಗ ಅವರು ಹಾಸನದಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳು ತುಮಕೂರಿನಿಂದ ಬೆಂಗಳೂರಿಗೆ ಹಾಸನ ತಲುಪಿದ್ದರು. ಹಾಸನದಲ್ಲಿ ಪೊಲೀಸರು ಅನುಮಾನದಿಂದ ಮಕ್ಕಳನ್ನು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದರು. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳಾಗಿದ್ದರು. ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ. ಎಷ್ಟೇ ಹುಡುಕಿದರೂ ಮಕ್ಕಳು ಸಿಗದ ಕಾರಣ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಮಕ್ಕಳು ಹಾಸನದಲ್ಲಿ ಪತ್ತೆಯಾಗಿದ್ದು, ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

 

- Advertisement -

Latest News

error: Content is protected !!