Friday, June 5, 2026
Homeಕರಾವಳಿಉಪ್ಪಿನಂಗಡಿ: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

ಉಪ್ಪಿನಂಗಡಿ: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

- Advertisement -
- Advertisement -

ಉಪ್ಪಿನಂಗಡಿ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್‍ನ ಕುಮಾರಧಾರ ನದಿ ತೀರದಲ್ಲಿ ನಡೆದಿದೆ. ಶರೀಫುದ್ದೀನ್ (19) ಮೃತ ಯುವಕ.

ಈ ಬಗ್ಗೆ ಮೃತ ಯುವಕನ ಮಾವ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ನನ್ನ ತಂಗಿ ಹಾಗೂ ಆಕೆಯ ಮಗ ಶರೀಫುದ್ದೀನ್ ಅವರ ಮನೆಯಲ್ಲಿದ್ದರು, ಮೇ 21ರಂದು ಸಂಜೆ 7:30ಕ್ಕೆ ನನಗೆ ಸ್ಥಳೀಯರು ಕರೆ ಮಾಡಿ ಶರೀಫುದ್ದೀನ್ ಗೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್‍ನ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ತಗುಲಿ ಅಸ್ವಸ್ಥಗೊಂಡ ವಿಚಾರ ತಿಳಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದರು. ಅಲ್ಲಿಗೆ ಹೋಗಿ ನೋಡಿದಾಗ ಶರೀಫುದ್ದೀನ್ ಮೃತಪಟ್ಟಿದ್ದ. ಆತನ ಎದೆ ಭಾಗದಲ್ಲಿ ವಿದ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!