Saturday, June 13, 2026
Homeಕರಾವಳಿಪುತ್ತೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಪುತ್ತೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

- Advertisement -
- Advertisement -

ಪುತ್ತೂರು ; ಹಾಡು ಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿರುವ ಘಟನೆ  ಪುತ್ತೂರಿನ ಬನ್ನೂರಿನಲ್ಲಿ ಸೋಮವಾರ ನಡೆದಿದೆ.

ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಲ್ಲಿ  ಕಳ್ಳತನ ವಾಗಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದರು.ಮಧ್ಯಾಹ್ನ 12 ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ.

ಕಳ್ಳರು ಚಿನ್ನದ ಸರ, ಚಿನ್ನದ ಕರಿಮಣಿ ಸರ, ಚಿನ್ನದ ಬ್ರಾಸ್ಲೈಟ್, ಚಿನ್ನದ 13 ಉಂಗುರ, ಚಿನ್ನದ 2 ಕೈಬಳೆ ಸಹಿತ ರೂ.6 ಲಕ್ಷ 90 ಸಾವಿರ ರೂಪಾಯಿ ಬೆಲೆ ಬಾಳುವ 152 ಗ್ರಾಂ ಚಿನ್ನಾಭರಣ ರೂ.50 ಸಾವಿರ ಹಣವನ್ನು ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪುತ್ತೂರು ನಗರ ಠಾಣೆಯ ಇನ್ಸ್ಪೆಕ್ಟರ್ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!