Saturday, June 6, 2026
Homeಮನರಂಜನೆಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಲಚ್ಚಿಗೆ ಕೊರೊನಾ ಆತಂಕ

ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಲಚ್ಚಿಗೆ ಕೊರೊನಾ ಆತಂಕ

- Advertisement -
- Advertisement -

ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ.  ಮನೆಯಿಂದ ಹೊರಗೆ ಬರೋದಕ್ಕೆ ಕಷ್ಟ ಅನ್ನೋ ಪರಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗಲೇ ಇದೀಗ ಕನ್ನಡ ಕಿರುತೆರೆಯಲ್ಲಿ ಫೇಮಸ್ ಆಗಿದ್ದ ನಟಿಯೊಬ್ಬರು ಕೊರೊನಾ ಆತಂಕವನ್ನು ಎದುರಿಸುತ್ತಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ನಟಿ ರಶ್ಮಿ ಪ್ರಭಾಕರ್ ಸದ್ಯ ತೆಲುಗು ಧಾರವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ಆದರೆ ಅವರ ಧಾರಾವಾಹಿಯ ನಟನೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಧಾರಾವಾಹಿಯ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ತಾನು ಕೂಡ ಸಿರೀಯಲ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರಿಂದ ಸದ್ಯ ನಾನು ಕೂಡ ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ ಅಂತಾ ಅವರು ಹೇಳಿದ್ದಾರೆ. ಅಲ್ಲದೇ ನಾನು ಆ ನಟನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಆರೋಗ್ಯವಾಗಿದ್ದಾರೆ ಅಂತಾ ರಶ್ಮಿ ಪ್ರಭಾಕರ್ ಹೇಳಿದ್ದಾರೆ.

ಅಲ್ಲದೇ ಕೊರೊನಾ ಪಾಸಿಟಿವ್ ವಿಚಾರ ಗೊತ್ತಾಗುತ್ತಿದ್ದಂತೆ ಚಿತ್ರೀಕರಣ ನಡೆಯುತ್ತಿದ್ದ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗಿದೆ. ಹಾಗೇ ಅಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅಂತಾ ರಶ್ಮಿ ಹೇಳಿದ್ದಾರೆ.

- Advertisement -

Latest News

error: Content is protected !!