Saturday, June 6, 2026
Homeಕರಾವಳಿಮಂಗಳೂರು; 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಂದರ್

ಮಂಗಳೂರು; 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಂದರ್

- Advertisement -
- Advertisement -

ಮಂಗಳೂರು: 17 ವರ್ಷಗಳಿಂದ ಪೊಲೀಸರಿಗೆ ಚಳೇಹಣ್ಣು ತಿನ್ನಿಸಿ  ತಲೆಮರೆಸಿಕೊಂಡು ಓಡಾಡುತ್ತಿದ್ದ 420 ಕೇಸ್ ಆರೋಪಿಯನ್ನು ಕೊನೆಗೂ  ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳದ ಮೇರಮಜಲು ಪಕ್ಕಾಲ ಪಡೆ ನಿವಾಸಿ

ಜೇಸನ್ ಪೀಟರ್ ಡಿ’ಸೋಜ (42) ಬಂಧಿತ ಆರೋಪಿ .

ಬಂಧಿತ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೂ ಸಿಗದೇ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು LPC(long pending case) ಪ್ರಕರಣ ಎಂದು ವಾರಂಟ್ ಹೊರಡಿಸಿತ್ತು. ಅದರಂತೆ ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

- Advertisement -

Latest News

error: Content is protected !!