Saturday, June 6, 2026
Homeತಾಜಾ ಸುದ್ದಿಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಗಡಿಪಾರು ಭೀತಿಯಲ್ಲಿದ್ದ  ಸ್ಯಾಂಡಲ್ ವುಡ್ ನಟ ಚೇತನ್ ಅವರಿಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ . ಒಸಿಐ ಮಾನ್ಯತೆ ರದ್ದಾಗುವ ವಿಚಾರವಾಗಿ ಹೈಕೋರ್ಟ್ ತಡೆಯಾಜ್ಞೆಯನ್ನು ಜೂನ್.20ರವರೆಗೆ ವಿಸ್ತರಿಸಿ ರಿಲೀಫ್ ನೀಡಿದೆ.

ನಟ ಚೇತನ್ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಸಚಿವಾಲಯ ಭಾರತದ ಸಾಗರೋತ್ತರ ನಾಗರಿಕ ವೀಸಾವನ್ನು ರದ್ದುಗೊಳಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅವರಿಗೆ ಒಸಿಐ ವೀಸಾ ರದ್ದು ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಲಾಗಿತ್ತು.

ಇಂದಿನವರೆಗೆ ಅವರ ಒಸಿಐ ವೀಸಾ ರದ್ದತಿ ಮೇಲಿನ ತಡೆಯಾಜ್ಞೆ ನೀಡಲಾಗಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಜೂನ್.20ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಿದೆ. 

- Advertisement -

Latest News

error: Content is protected !!