Wednesday, June 3, 2026
Homeತಾಜಾ ಸುದ್ದಿಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ

ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ

- Advertisement -
- Advertisement -

ದಾವಣಗೆರೆ : ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಹಿಂದಿನ ಸರ್ಕಾರ 39782 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದರು ಎಂದರು.ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಾತನಾಡಿ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯ್ದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ ಎಂದರು.

- Advertisement -

Latest News

error: Content is protected !!