Sunday, June 7, 2026
Homeಕರಾವಳಿಉಡುಪಿಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಕೊಲ್ಲೂರು: ದೇವಸ್ಥಾನದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದೆ. ಭಕ್ತರೊಬ್ಬರ ಪರ್ಸ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ.

ಕೇರಳ ಮೂಲದ ಪ್ರವೀಣ ತನ್ನ ಕುಟುಂಬದೊಂದಿಗೆ ಜೂ.4ರಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದು ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ಪ್ರವೀಣ ಅವರ ಪತ್ನಿಯ ಬ್ಯಾಗ್ ತೆರೆದಿರುವುದು ಕಂಡು ಬಂತು.

ಪರಿಶೀಲಿಸಿದಾಗ ದೇವಸ್ಥಾನಕ್ಕೆ ಬಂದ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳಲ್ಲಿ ಯಾರೋ ಕಳ್ಳರು ವ್ಯಾನಟಿ ಬ್ಯಾಗ್‌ನ ಒಳಗಡೆ ಪರ್ಸ್‌ನಲ್ಲಿದ್ದ 108 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ 4.75ಲಕ್ಷ ರೂ. ಎಂದು ಅಂದಾಜಿಸ ಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!