Saturday, June 6, 2026
Homeಕರಾವಳಿಮಂಗಳೂರು - ವಿಜಯಪುರ ರೈಲು ಸಂಚಾರ ರದ್ದು

ಮಂಗಳೂರು – ವಿಜಯಪುರ ರೈಲು ಸಂಚಾರ ರದ್ದು

- Advertisement -
- Advertisement -

ಮಂಗಳೂರು – ವಿಜಯಪುರ ರೈಲು ಸಂಚಾರ 17 ದಿನಗಳವರೆಗೆ ಭಾಗಶಃ ರದ್ದಾಗಲಿದೆ.ಮೈಸೂರು ವಿಭಾಗದ ಸಿರಿಬಾಗಿಲು ಮತ್ತು ಯಡಕುಮರಿ ನಿಲ್ದಾಣಗಳ ನಡುವಿನ ಹಳಿಗಳ ನಿರ್ವಹಣೆ (ಮಷಿನ್ ಟ್ಯಾಂಪಿಂಗ್) ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು 17 ದಿನಗಳವರೆಗೆ ಭಾಗಶಃ ರದ್ದುಗೊಳಿಸಲಾಗುತ್ತದೆ. 

ಜೂನ್ 8 ರಿಂದ 24 ರವರೆಗೆ ವಿಜಯಪುರ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07377 ವಿಜಯಪುರ – ಮಂಗಳೂರು ಜಂಕ್ಷನ್ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಹಾಸನ ಮತ್ತು ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಹಾಸನದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.

ಜೂನ್ 9 ರಿಂದ ಜೂನ್ 25 ರವರೆಗೆ ಮಂಗಳೂರು ಜಂಕ್ಷನ್ ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್ – ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲ್ ಓಡಾಟವನ್ನು ಮಂಗಳೂರು ಜಂಕ್ಷನ್ ಮತ್ತು ಹಾಸನ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಸಂಚಾರ ನಿಗದಿತ ಸಮಯದಲ್ಲಿ ಹಾಸನದಿಂದ ಪ್ರಾರಂಭವಾಗಲಿದೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!