Monday, June 8, 2026
HomeUncategorizedಕಾರ್ಕಳ; ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ; ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಕಾರ್ಕಳ; ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತ ದುರ್ದೈವಿ.

ಕಾರ್ತಿಕ್ ಬೈಲೂರಿನಿಂದ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರ್ತಿಕ್‌ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

Latest News

error: Content is protected !!