Thursday, June 4, 2026
Homeಕರಾವಳಿಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ಶಾಸಕ ಹರೀಶ್ ಪೂಂಜ ಹೇಳಿಕೆ...

ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ಶಾಸಕ ಹರೀಶ್ ಪೂಂಜ ಹೇಳಿಕೆ ಪ್ರಕರಣ; ಪೂಂಜಗೆ ಬಿಗ್ ರಿಲೀಫ್

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ಬಿಜೆಪಿ ಶಾಸಕ ಹರೀಶ್ ಪೂಂಜ ಹೇಳಿಕೆ ಪ್ರಕರಕ್ಕೆ ಸಂಬಂಧಪಟ್ಟಂತೆ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ , ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿ ಇಂದು(ಜೂನ್ 09) ಆದೇಶ ಹೊರಡಿಸಿದೆ.

ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು.

- Advertisement -

Latest News

error: Content is protected !!