Sunday, June 7, 2026
Homeಕರಾವಳಿಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿ ಇರಿದು ಪತಿ ಪರಾರಿ

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿ ಇರಿದು ಪತಿ ಪರಾರಿ

- Advertisement -
- Advertisement -

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿ ಇರಿದು ಪತಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ.

 ಜೂನ್ 15 ರಂದು ರಾತ್ರಿ 10.30 ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ಹೋಗುತ್ತಿದ್ದಾಗ ದಿವ್ಯ ಅವರ ಪತಿ ಕುಮಾರ ಆಟೋವನ್ನು ತುಂಬೆ ಜಂಕ್ಷನ್ ನಲ್ಲಿ ತಡೆದು , ಚೂರಿ ಹಿಡಿದುಕೊಂಡು ಬಂದು ಪತ್ನಿ ದಿವ್ಯಾಗಿಗೆ ಇರಿಯಲು ಯತ್ನಿಸಿದ್ದಾನೆ.

ಈ ವೇಳೆ ಬಿಡಿಸಲು ಹೋದ ಮಾವ ರಾಜೀವರಿಗೆ ಚೂರಿಯಿಂದ ಇರಿದಿದ್ದು, ಮೂವರ ಮಧ್ಯೆಯೂ ತಳ್ಳಾಟ ನಡೆದು ರಾಜೀವ ಹಾಗೂ ದಿವ್ಯ ಇಬ್ಬರು ಗಂಭೀರವಾಗಿ ಗಾಯಗೊಂಡು, ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯ ಕುರಿತು ಅಟೋ ಚಾಲಕ ಯಶೋಧರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕೌಟುಂಬಿಕ ಮನಸ್ತಾಪದಿಂದಲೇ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!