Saturday, June 6, 2026
Homeಕರಾವಳಿಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ರೇಪ್& ಮರ್ಡರ್ ಪ್ರಕರಣ:ಸಿಬಿಐ ವಿಶೇಷ ಕೋರ್ಟ್ ಗೆ ಹಾಜರಾದ...

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ರೇಪ್& ಮರ್ಡರ್ ಪ್ರಕರಣ:ಸಿಬಿಐ ವಿಶೇಷ ಕೋರ್ಟ್ ಗೆ ಹಾಜರಾದ ಆರೋಪಿ ಸಂತೋಷ್ ರಾವ್:ಇಂದು ಸಿಬಿಐ ಕೋರ್ಟ್ ನಲ್ಲಿ ಪ್ರಕರಣದ ತೀರ್ಪು ಪ್ರಕಟ

- Advertisement -
- Advertisement -

ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು(ಇಂದು) ತೀರ್ಪು ಪ್ರಕಟವಾಗಲಿದ್ದು. ಆರೋಪಿ ಸಂತೋಷ್ ರಾವ್ ಕೋರ್ಟ್ ನಿಂದ ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದ್ದು ಅದರಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮವತಿ ದಂಪತಿಗಳ ಎರಡನೇ ಮಗಳು ಸೌಜನ್ಯ (17) ಕಾಲೇಜ್ ಮುಗಿಸಿ ಮನೆಗೆ ವಾಪಸ್ ಹೋಗುವಾಗ 10-10-2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು‌. ನಂತರ ಆರೋಪಿ ಸಂತೋಷ್ ರಾವ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು. ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಊರಿನಲ್ಲಿದ್ದ .ಹಲವು ಹೋರಾಟ ನಡೆಸಿದ ಬಳಿಕ ಪ್ರಕರಣವನ್ನು ಸಿಐಡಿಯಿಂದ ಕೇಂದ್ರ ಸಿಬಿಐ ತನಿಖೆ ನಡಿದ್ದು.ಅದರಂತೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿತ್ತು.

ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದ. ಪ್ರಕರಣ ನಡೆದು 11 ವರ್ಷಗಳ ಬಳಿಕ ದಿ.16-06-2023 ರಂದು(ಇಂದು) ಪ್ರಕರಣದ ತೀರ್ಪು ಸಂಜೆ ವೇಳೆಗೆ ಪ್ರಕಟವಾಗಲಿದೆ.

- Advertisement -

Latest News

error: Content is protected !!