Saturday, June 6, 2026
Homeಕರಾವಳಿಉಡುಪಿಉಡುಪಿ: ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಉಡುಪಿ: ಶಿಕ್ಷಕರ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

- Advertisement -
- Advertisement -

ಉಡುಪಿ: ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೊದಲೇ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ನಡುವೆ ಇಲ್ಲಿನ ಒಬ್ಬ ಶಿಕ್ಷಕನನ್ನು ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಒಟ್ಟು ಐವತ್ತೆಂಟು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಯಲ್ಲಿರುವ ಮೂವರು ಶಿಕ್ಷಕರಲ್ಲಿ ಓರ್ವ ಶಿಕ್ಷಕನನ್ನು, ಹೆಚ್ಚುವರಿ ಶಿಕ್ಷಕರ ನೆಪವೊಡ್ಡಿ ವರ್ಗಾವಣೆ ಮಾಡ್ತಿರೋದನ್ನ ವಿರೋಧಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಿದ್ರು.

- Advertisement -

Latest News

error: Content is protected !!