Saturday, June 6, 2026
Homeಕರಾವಳಿಬೆಳ್ತಂಗಡಿಯ ವಿದ್ಯಾರ್ಥಿನಿ ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿಯ ವಿದ್ಯಾರ್ಥಿನಿ ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿಯ ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಆತ್ಮಹತ್ಯೆಗೆ ಶರಣದಾಕೆ .

ಆದೀರಾ, ಸಹೋದರರಾದ ನರೇಂದ್ರ ಮತ್ತು ರೋಹಿತ್ ಅವರ ಜೊತೆ ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದರು‌. ಅಲ್ಲಿಂದಲೇ ತೆರಳಿ ಆದೀರಾ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು.

ಆದರೆ ಕಳೆದ ಭಾನುವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಆದೀರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಆದೀರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ.

ಬಳಿಕ ಸ್ಥಳೀಯರ ಸಹಕಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಮಗಳನ್ನು ಕೊಂಡು ಹೋಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಪರೀಕ್ಷಿಸಿದ ವೈದ್ಯರು ಯುವತಿ ಮೃತ ಪಟ್ಟಿರುವುದಾಗಿ ಧೃಡಪಡಿಸಿದ್ದಾರೆ.ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಯುವತಿಯ ಮೊಬೈಲ್ ವಿವರಗಳನ್ನು ಪರಿಶೀಲನೆ ನಡೆಸುತಿದ್ದಾರೆ.

- Advertisement -

Latest News

error: Content is protected !!