Tuesday, July 1, 2025
Homeಕರಾವಳಿಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಮಾಜಿ ಸಚಿವ ರಮಾನಾಥ ರೈ ನಿವಾಸಕ್ಕೆ ಸಚಿವ ದಿನೇಶ್...

ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಮಾಜಿ ಸಚಿವ ರಮಾನಾಥ ರೈ ನಿವಾಸಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

spot_img
- Advertisement -
- Advertisement -

ಬಂಟ್ವಾಳ: ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ನೀಡಿ ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು. ಬಳಿಕ ದಿನೇಶ್ ಗುಂಡೂರಾವ್ ಅವರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮನೆಗೂ ಭೇಟಿ ನೀಡಿದರು.

ದಿ| ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ತಾನು ಮಾಜಿ ಸಿಎಂ ಗುಂಡೂರಾವ್ ಜತೆಯಾಗಿ ಕೆಲಸ ಮಾಡಿದ್ದೆವು. ದ.ಕ.ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವಂತೆ ಪೂಜಾರಿಯವರು ಇದೇ ವೇಳೆ ತಿಳಿಸಿದರು. ನಿಮ್ಮ ಮಾರ್ಗದರ್ಶನ ಪಡೆಯುವುದೇ ನಮ್ಮ ಸೌಭಾಗ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಹರೀಶ್‌ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್, ಮಿಥುನ್ ರೈ, ಕೆಪಿಸಿಸಿ ಸಂಯೋಜಕ ಕರುಣಾಕರ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!