Sunday, June 7, 2026
Homeಕರಾವಳಿಸುಬ್ರಹ್ಮಣ್ಯ: ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ: ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿದರು.ಈ ವೇಳೆ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ದೇಗುಲದ ಅರ್ಚಕರು ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ದೇವಳದಲ್ಲಿ ಪ್ರಸಾದ ಭೋಜನ ಸ್ವೀಕರಿಸಿದರು.

ರಾಹುಲ್ ಆಗಮಿಸಿದ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್ ಸ್ವಾಗತಿಸಿದರು. ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ಇವರು ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!