Saturday, June 6, 2026
Homeಕರಾವಳಿಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ

- Advertisement -
- Advertisement -

ಪುತ್ತೂರು: ರಾಜ್ಯಾದ್ಯಂತ ಇಂದು ಬೆಳಗ್ಗೆಯೇ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಪುತ್ತೂರು ಮೂಲದ ತಹಶೀಲ್ದಾರ್ ಮನೆ ಮೇಲೆ ಕೂಡಾ ದಾಳಿ ನಡೆದಿದೆ.

ಬೆಂಗಳೂರಿನ ಕೆ.ಆರ್. ಪುರಂ ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈ ಮಾಲಾಡಿ ಅವರ ಬೆಂಗಳೂರಿನ ನಿವಾಸ ಮತ್ತು ಪುತ್ತೂರಿನ ನಿವಾಸಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪುತ್ತೂರಿನಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಬೆಂಗಳೂರಿನ ಅಜಿತ್ ರೈ ನಿವಾಸದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದು, ಇನ್ನೂ ಕೂಡಾ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.‌ಈ ಹಿಂದೆ ಪ್ರಕರಣವೊಂದರಲ್ಲಿ ಅಜಿತ್ ರೈ ಸರಕಾರಿ ಸೇವೆಯಿಂದ ಅಮಾನತುಗೊಂಡಿದ್ದರು.

- Advertisement -

Latest News

error: Content is protected !!