Saturday, June 6, 2026
Homeಕರಾವಳಿಉಡುಪಿಉಡುಪಿ:ಟೆರೇಸ್ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಉಡುಪಿ:ಟೆರೇಸ್ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

- Advertisement -
- Advertisement -

ಉಡುಪಿ:ಟೆರೇಸ್ ಮೇಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಮಣಿಪಾಲ ದಶರಥ ನಗರ ಎಂಬಲ್ಲಿ ನಡೆದಿದೆ.

ಧಾರವಾಡ ಮೂಲದ ನಾಮದೇವ ಜಾಧವ್ ಎಂಬವರ ಮಗ ಆಯುಷ್(8) ಮೃತ ಬಾಲಕ.ಆಯುಷ್ ಗೆ ನಾಲಿಗೆಯ ಶಸ್ತ್ರ ಚಿಕಿತ್ಸೆಗಾಗಿ ಕುಟುಂಬ ಮೊನ್ನೆಯಷ್ಟೇ ಮಣಿಪಾಲಕ್ಕೆ ಬಂದು ದಶರಥ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು.

ಭಾನುವಾರ ಆಯುಷ್ ಇತರ ಮಕ್ಕಳೊಂದಿಗೆ ಮನೆಯ ಟೆರಸ್ ಮೇಲೆ ಆಟ ಆಡುತ್ತಿದ್ದ. ಆಗ ಆಯತಪ್ಪಿ ಆಕಸ್ಮಿಕವಾಗಿ ಟೆರಸ್‌ನಿಂದ ಕೆಳಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!