Friday, June 5, 2026
Homeಕರಾವಳಿಉಡುಪಿಉಡುಪಿ; ಕಾರು ಅಪಘಾತಕ್ಕೆ‌ ವೈದ್ಯ ಬಲಿ

ಉಡುಪಿ; ಕಾರು ಅಪಘಾತಕ್ಕೆ‌ ವೈದ್ಯ ಬಲಿ

- Advertisement -
- Advertisement -

ಉಡುಪಿ: ಕಾರು ಚಾಲಕನ ನಿಯಂತ್ರಣ ತಪ್ಪಿ‌‌  ಅಪಘಾತವಾಗಿ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ.

ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ.ಸೂರ್ಯನಾರಾಯಣ ಮೃತರು.
ಅಪಘಾತದಲ್ಲಿ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಮೂವರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ತಲೆಗೆ ತೀವ್ರ ಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!